ಮಂಗಳೂರು ವಿ.ವಿ ಮಹಿಳೆಯರ ಕಬಡ್ಡಿ : ವಿವೇಕಾನಂದ ಕಾಲೇಜಿನ ಉತ್ತಮ ಸಾಧನೆ

0

ಪುತ್ತೂರು: ಕಳೆದ ಸೆಪ್ಟೆಂಬರ್ 29 ಮತ್ತು 30 ರಂದು ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026-27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ..

ಸುಮಾರು 30 ಕಾಲೇಜುಗಳು ಭಾಗವಹಿಸಿದಂತಹ ಈ ಪಂದ್ಯಾಟದ ಪೂರ್ವಭಾವಿಯಾಗಿ ನಡೆದಂತಹ ಪ್ರಿಲಿಮಿನರಿ ಹಂತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನ ಪಡೆದುಕೊಂಡಿದ್ದಾರೆ. ಕು ತೃಶಾ.- ದ್ವಿತೀಯ ಬಿ ಕಾಂ, ಉತ್ತಮ ರೈಡರ್ ಪ್ರಶಸ್ತಿಯನ್ನು ಗಳಿಸಿದ್ದಾರೆ. ತಂಡವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು, ಅನ್ನಪೂರ್ಣ ರೈ – ತೃತೀಯ ಬಿಬಿಎ, ಭೂಮಿಕಾ – ತೃತೀಯ ಬಿಎ, ಹೇಮಲತಾ – ತೃತೀಯ ಬಿಎ, ರಶ್ಮಿತ. ಎನ್ – ತೃತೀಯ ಬಿಸಿಎ, ನಿಕ್ಷಿತ – ದ್ವಿತೀಯ ಬಿಕಾಂ, ಅಮೂಲ್ಯ ಪಿ ಆರ್ – ದ್ವಿತೀಯ ಬಿಕಾಂ, ವರ್ಷಿತ ಹೆಚ್ ವಿ – ದ್ವಿತೀಯ ಬಿ ಸಿ ಎ , ಆದ್ಯ ಬಿ ಆರ್ – ಪ್ರಥಮ ಬಿಕಾಂ, ಸೋನಾಲಿ – ಪ್ರಥಮ ಬಿಬಿಎ. ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕ ಯತೀಶ್ ಕುಮಾರ್ ಹಾಗೂ ಡಾ. ಜ್ಯೋತಿ ಇವರು ತರಬೇತಿ ನೀಡಿದ್ದಾರೆ.


ತಂಡದ ಈ ಸಾಧನೆಯಿಂದಾಗಿ ಕಾಲೇಜು ಮುಂದಿನ ವರ್ಷ ನಡೆಯುವ ಪಂದ್ಯಾಟದಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್ ಹಂತದಲ್ಲಿ ಸ್ಪರ್ಧಿಸುವ ಅರ್ಹತೆಯನ್ನು ಗಳಿಸಿದೆ. ವಿದ್ಯಾರ್ಥಿನಿಯರ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here