







ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಮಕುಂಜ ಇವರ ಸಂಯುಕ್ತ ಆಶ್ರಯದಲ್ಲಿ ಅ.1 ಮತ್ತು 2ರಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ಕಡಬ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಬಾಲಕರ ಹಾಗೂ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ತಂಡ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿ ಯಶವಂತ್ ಯಸ್.ವಿ.ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮ ಬಿ., ದಿವ್ಯ ಪಿ.ಎನ್., ರಾಘವ, ಕಿಶನ್ರಾಜ್ರವರು ತರಬೇತಿ ನೀಡಿದ್ದರು.















