







ನೆಲ್ಯಾಡಿ: ಗ್ರಾಮೀಣ ಭಾಗದ ಜನರಿಗೆ ತುರ್ತು ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಕೌಕ್ರಾಡಿ ಗ್ರಾಮದ ಹೊಸಮಜಲು ಅಶ್ವತ್ಥ ಗೆಳೆಯರ ಬಳಗದ ವತಿಯಿಂದ ಆರಂಭಿಸಿರುವ ಆಂಬುಲೆನ್ಸ್ ಸೇವೆಗೆ ಅ.4ರಂದು ಚಾಲನೆ ನೀಡಲಾಯಿತು.


ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಆಂಬುಲೆನ್ಸ್ ಕೀ ಹಸ್ತಾಂತರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು. ಅಶ್ವತ್ಥ ಗೆಳೆಯರ ಬಳಗದ ಅಧ್ಯಕ್ಷ ರೋಷನ್ ಬಿ.ಜೆ. ಅವರು ತೆಂಗಿನಕಾಯಿ ಒಡೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ ಅವರು, ಸಂಘಟನೆಯಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಮಾಜ ಮುಖಿ ಕಾರ್ಯಗಳು ಮೂಡಿಬರಲಿ. ಜಿಲ್ಲೆ, ರಾಜ್ಯ ಹಾಗೂ ದೇಶದ ಮಟ್ಟದಲ್ಲಿ ಅಶ್ವತ್ಥ ಗೆಳೆಯರ ಬಳಗವು ಉತ್ತಮ ಸಂಘಟನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿ ಎಂದರು. ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಮುರಳೀಧರ ಕೆ.ವೈ. ಕೌಕ್ರಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ.ಕೆ. ಇಬ್ರಾಹಿಂ ಸಂದರ್ಭೋಚಿತವಾಗಿ ಮಾತನಾಡಿದರು.



ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸುಳ್ಯ ಮಂಡಲದ ಕಾರ್ಯದರ್ಶಿ ಗಣೇಶ್ ಉದನಡ್ಕ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ನಿವೃತ್ತ ಮುಖ್ಯಶಿಕ್ಷಕ ಶೀನಪ್ಪ ನಾಯ್ಕ ಎಸ್., ಮುಖ್ಯಶಿಕ್ಷಕಿ ಜಯಂತಿ ಬಿ.ಎಂ., ರವಿಚಂದ್ರ ಅತ್ರಿಜಾಲು, ನೆಲ್ಯಾಡಿ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಸುಪ್ರೀತಾ ರವಿಚಂದ್ರ, ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್, ರಮೇಶ್ ಶೆಟ್ಟಿ ಬೀದಿಮನೆ, ಗಿರೀಶ್ ಶೆಟ್ಟಿ ಬೀದಿಮನೆ, ಅರ್ಚಕ ಶ್ರೀಧರ ನೂಜಿನ್ನಾಯ, ಚಂದ್ರಶೇಖರ ಶೆಟ್ಟಿ ಗೋಳಿತ್ತೊಟ್ಟು, ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಪ್ರಾಚಾರ್ಯ ಜಾರ್ಜ್ ಟಿ.ಎಸ್., ಅಂತರಾಜ್ಯ ಕ್ರೀಡಾ ನಿರೂಪಕ ಸುರೇಶ್ ಪಡಿಪಂಡ, ಮೋಹನ್ ಕಟ್ಟೆಮಜಲು, ಉಮೇಶ್ ಪೂಜಾರಿ ಪೊಸೊಳಿಕೆ, ಅನಿಲ್ ರೈ, ದೀಪಕ್, ದಿನೇಶ್, ರಕ್ಷಿತ್ ಮಡಿವಾಳ, ನೌಷದ್, ಪ್ರಜ್ವಲ್ ನವಾಜ್, ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪದಾಧಿಕಾರಿಗಳು, ಟೀಮ್ ಸಿಂಧೂರ ತಂಡದ ಸದಸ್ಯರು ಹಾಗೂ ಅಶ್ವತ್ಥ ಗೆಳೆಯರ ಬಳಗದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ವಂದನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಂಘದ ಗೌರವಾಧ್ಯಕ್ಷ ಬಾಲಕೃಷ್ಣ ಬಾಣಜಾಲು ವಂದಿಸಿದರು.










