







ರಕ್ತದಾನ ಜೀವ ಉಳಿಸುವ ಮಹತ್ಕಾರ್ಯ: ಶಾಸಕಿ ಭಾಗೀರಥಿ ಮುರುಳ್ಯ


ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ರಕ್ತದಾನ ಶಿಬಿರ ಅ.3ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.



ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಿಬಿರ ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಪಾರದರ್ಶಕ ಆಡಳಿತ ಹಾಗೂ ಜನಪರ ಯೋಜನೆಗಳನ್ನು ಗ್ರಾಮೀಣ ಮಟ್ಟದ ಜನರಿಗೆ ತಲುಪಿಸುವ ಉದ್ದೇಶದಿಂದ ಹಾಗೂ ಅವರ ಜನ್ಮದಿನದ ಪ್ರಯುಕ್ತ ಒಂದು ತಿಂಗಳ ಕಾಲ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗುವುದರ ಜತೆಗೆ, ಅಗತ್ಯವಿರುವ ಸಂದರ್ಭದಲ್ಲಿ ಅಮೂಲ್ಯ ಜೀವವೊಂದನ್ನು ಉಳಿಸುವ ಮಹತ್ಕಾರ್ಯ ಮಾಡಿದಂತಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಂಬೆ ಮಾತನಾಡಿ, ನೆಲ್ಯಾಡಿಯಲ್ಲಿ ಜೀವ ಉಳಿಸುವ ಮಹತ್ವದ ರಕ್ತದಾನ ಶಿಬಿರ ಆಯೋಜಿಸಿರುವುದು ಶ್ರೇಷ್ಠ ಸೇವಾ ಕಾರ್ಯವಾಗಿದೆ. ವಿಕಸಿತ ಭಾರತದ ಪರಿಕಲ್ಪನೆಯ ಸದುದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡಿಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುತ್ತೂರು ರೋಟರಿ ಕ್ಯಾಂಪ್ ಬ್ಲಡ್ ಸೆಂಟರ್‌ನ ಅಧ್ಯಕ್ಷ ದತ್ತಾತ್ರೇಯ ರಾವ್ ಅವರು ರಕ್ತದಾನದ ಮಹತ್ವ ಹಾಗೂ ರಕ್ತದಾನದಿಂದಾಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.
ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್. ಗೌಡ ಇಚ್ಲಂಪಾಡಿ, ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಜಿಲ್ಲಾ ಕಾರ್ಯದರ್ಶಿ ಪುಷ್ಪ ಮೇದಪ್ಪ, ಸುಳ್ಯ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ವಿನಯ ಕುಂಡಡ್ಕ ಉಪಸ್ಥಿತರಿದ್ದರು.
ಜಗನ್ನಾಥ ಸುಳ್ಯ ವಂದೇ ಮಾತರಂ ಗೀತೆ ಹಾಡಿದರು. ಕೊಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ ರಾಮನಗರ ಸ್ವಾಗತಿಸಿದರು. ನೆಲ್ಯಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು ಕಾರ್ಯಕ್ರಮ ನಿರೂಪಿಸಿದರು. ಕೊಯಿಲ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ರಾಮಚಂದ್ರ ಕೊಯಿಲ ವಂದಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ಮಂಡಲ ಸಮಿತಿಯ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಪುತ್ತೂರು ರೋಟರಿ ಕ್ಯಾಂಪ್ ಬ್ಲಡ್ ಸೆಂಟರ್ ಹಾಗೂ ಮಂಗಳೂರಿನ ವೆಲ್ಲಾಕ್ ಆಸ್ಪತ್ರೆ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ರಕ್ತದಾನ ಶಿಬಿರಕ್ಕೆ ಸಹಕಾರ ನೀಡಿದರು.










