







ಉಪ್ಪಿನಂಗಡಿ: ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿಯ ಪೆರಾಬೆ ನಿವಾಸಿ ಮಾಧವ ಗೌಡ (44) ಅವರು ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಆತ್ಮಹತ್ಯೆ ಎಂದು ತಿಳಿದುಬಂದಿದೆ.


ಆತೂರಿನಲ್ಲಿ ಟಯರ್ ಪಂಕ್ಚರ್ ಅಂಗಡಿಯನ್ನು ಇತ್ತೀಚೆಗಷ್ಟೇ ಆರಂಭಿಸಿದ್ದ ಮಾಧವ ಗೌಡ ಅವರು ಅ.2ರಂದು ಮನೆಯಿಂದ ಅಂಗಡಿಗೆಂದು ತೆರಳಿದವರು ವಾಪಸ್ ಮನೆಗೆ ಬಾರದೇ ನಾಪತ್ತೆಯಾಗಿದ್ದರು. ಅವರ ಬೈಕ್ ಮತ್ತು ಮೊಬೈಲ್ ಉಪ್ಪಿನಂಗಡಿಯ ಕುಮಾರಧಾರ ನದಿಯ ಹಳೆ ಸೇತುವೆಯ ಮೇಲೆ ಪತ್ತೆಯಾಗಿತ್ತು. ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆಯಿಂದ ಅ.4ರಂದು ಪುತ್ತೂರು ಅಗ್ನಿಶಾಮಕ ದಳದ ತಂಡ ಹಾಗೂ ಮುಳುಗು ತಜ್ಞರು ದೋಣಿಯಲ್ಲಿ ತೆರಳಿ ಮಧ್ಯಾಹ್ನದಿಂದ ಸಂಜೆಯವರೆಗೆ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಆದರೆ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ.



ಎರಡು ದಿನಗಳ ಬಳಿಕ ನೆಕ್ಕಿಲಾಡಿ ಗ್ರಾಮದ ಬೊಳ್ಳಾರ್ ಬಳಿ ನೇತ್ರಾವತಿ ನದಿಯಲ್ಲಿ ಅವರ ಶವ ಪತ್ತೆಯಾಗಿದೆ. ಅವರ ನಾಪತ್ತೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










