ಶ್ರೀ ರಾಮಕೃಷ್ಣ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

0

ಪುತ್ತೂರು : ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು ವಹಿಸಿದ್ದರು.ಶಾಲಾ ಮುಖ್ಯ ಶಿಕ್ಷಕಿ‌ ಗಾಯತ್ರಿಎಸ್, ವಿಶ್ರಾಂತ ಶಿಕ್ಷಕರುಗಳಾದ ಎನ್ ಮನೋಹರ ರೈ, ವಸಂತಿ. ಕೆ, ರೂಪಕಲಾ ಕೆ, ಮಾಲತಿ, ಹಾಗೂ ಜಯಲಕ್ಷ್ಮಿ ಎ, ಶಿಕ್ಷಕಿ ಸಂಧ್ಯಾ.ಕೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾಗರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಬೇರೆ ಬೇರೆ ವೇದಿಕೆಗಳಲ್ಲಿ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿದ ಹಿರಿಯ ವಿದ್ಯಾರ್ಥಿಗಳಾದ ಅಂಕಿತಾ, ನಿಖಿಲ್ ಹೆಗ್ಡೆ ಹಾಗೂ ಭೂಮಿಕಾ ಅವರನ್ನು ಅಭಿನಂದಿಸಲಾಯಿತು. ಹಿರಿಯ ವಿದ್ಯಾರ್ಥಿಗಳಿಗೆ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.

ಸಭೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಷಾ ಪ್ರಕಾಶ್‌ರವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಗ್ರೀಷ್ಮಾರವರು ಸ್ವಾಗತಿಸಿ, ಶಶಿಕಲಾ ರವರುಧನ್ಯವಾದಗೈದರು.ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here