







ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಅಕ್ಟೋಬರ್ 3 ರಂದು ಪರ್ಲಡ್ಕ ಮಾರ್ಗವಾಗಿ ಬಿರುಮಲೆ ಬೆಟ್ಟಕ್ಕೆ ಒಂದು ದಿನದ ಚಾರಣ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು. ಸಾಹಸ ಚಟುವಟಿಕೆಯೊಂದಿಗೆ ಪರಿಸರ ಜಾಗೃತಿ ಮತ್ತು ಸಮಾಜ ಸೇವೆಯನ್ನು ಸಂಯೋಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದ ಅಂಗವಾಗಿ ರೋವರ್ಸ್ ಮತ್ತು ರೇಂಜರ್ಸ್‌ಗಳು ಚಾರಣದ ಮಾರ್ಗದುದ್ದಕ್ಕೂ ಸ್ವಚ್ಛತಾ ಅಭಿಯಾನವನ್ನು ಕೈಗೊಂಡರು. ಪ್ರವಾಸಿಗರು ಹಾಗೂ ಸಾರ್ವಜನಿಕರು ಎಸೆದಿದ್ದ ಪ್ಲಾಸ್ಟಿಕ್ ಬಾಟಲಿಗಳು, ಕವರ್‌ಗಳು, ಆಹಾರದ ಪ್ಯಾಕೆಟ್‌ಗಳು ಮತ್ತು ಇತರ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರದ ಮೇಲಾಗುವ ದು?ರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಅಲ್ಲದೆ, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಹಾಗೂ ನೈಸರ್ಗಿಕ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯನ್ನು ಕಾಪಾಡುವಂತೆ ಮನವಿ ಮಾಡಿದರು.



ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ, ತಂಡದ ಮನೋಭಾವ, ಶಿಸ್ತು, ನಾಯಕತ್ವ, ಪರಿಸರ ಸಂರಕ್ಷಣೆಯ ಜವಾಬ್ದಾರಿ ಹಾಗೂ ಸಮಾಜ ಸೇವಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ರೇಂಜರ್ ಲೀಡರ್‌ಗಳಾದ ದಿವ್ಯಶ್ರೀ ಜಿ. ಮತ್ತು ದೀಪಿಕಾ ಎಸ್. ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.










