ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ವಿದ್ಯಾರ್ಥಿ ನಿಖಿಲ್ ಬಿ.ಕೆ.ಗೆ ಯೋಗಾಸನದಲ್ಲಿ ಚಿನ್ನ; ಅಖಿಲ ಭಾರತ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆ

0

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಇದರ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಿಖಿಲ್ ಬಿ.ಕೆ. ಅವರ ಸಾಧನೆಯ ಹಿನ್ನೆಲೆಯಲ್ಲಿ ಮುಂದಿನ ಹಂತವಾದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ತರಬೇತುದಾರ ನವೀನ್ ಕುಮಾರ್ ಬಿ. ಕೆ. ತರಬೇತಿ ನೀಡಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ|ಆಂಟನಿ ಪ್ರಕಾಶ್ ಮೊಂತೆರೋ ಅವರು ನಿಖಿಲ್ ಬಿ.ಕೆ. ಹಾಗೂ ತರಬೇತುದಾರರನ್ನು ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here