ವಿಭಾಗ ಮಟ್ಟದ ದಸರಾ ವೇಟ್‌ಲಿಫ್ಟಿಂಗ್-ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

0

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ವಿದ್ಯಾರ್ಥಿಗಳು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ ಮಾಡಿ ಐದು ಪದಕಗಳನ್ನು ಗೆದ್ದುಕೊಂಡಿದ್ದಾರೆ. ಅಲ್ಲದೆ, ಪದಕ ವಿಜೇತರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ತೃತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ದೃಶ್ಯಾ ಕೆ.ವಿ. 53 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಪಡೆದರೆ, ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಪ್ರೇಕ್ಷಾ ಪಿ. 61 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿ ಚಮೀಶ 69 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಪಡೆದರು. ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ಸಿಂಚನಾ ಬಿ. 77 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಗಳಿಸಿದರು. ತೃತೀಯ ಬಿ.ಎಸ್ಸಿ. ವಿದ್ಯಾರ್ಥಿ ರಿತೇಶ್ ಕೆ.ಐ. 70 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಕಾಲೇಜಿನ ಪದಕ ಪಟ್ಟಿಗೆ ಮತ್ತೊಂದು ಚಿನ್ನ ಸೇರಿಸಿದರು. ವಿದ್ಯಾರ್ಥಿಗಳಿಗೆ ತರಬೇತುದಾರ ಅಶ್ವತ್ ಗೌಡ ತರಬೇತಿ ನೀಡಿದ್ದರು.

ಕಾಲೇಜಿನ ಪ್ರಾಂಶುಪಾಲ ವಂ|ಡಾ| ಆಂಟನಿ ಪ್ರಕಾಶ್ ಮೊಂತೆರೋ ವಿದ್ಯಾರ್ಥಿಗಳು ಹಾಗೂ ತರಬೇತುದಾರರನ್ನು ಅಭಿನಂದಿಸಿ, ಅವರ ಸಾಧನೆ ಹಾಗೂ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದಕ್ಕೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here