







ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಅ.2ರಂದು ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜಯಂತಿ ಆಚರಿಸಲಾಯಿತು.



ಎಸ್‌ಆರ್‌ವಿ ವಿಕ್ರಾಂತ್ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವತಿಯಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಮಹಾತ್ಮ ಗಾಂಧೀಜಿಯವರ ಸ್ಮರಣೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಕೆ. ಸೇಸಪ್ಪ ರೈ ಅವರು ಮಾತನಾಡಿ, ಸರ್ವಧರ್ಮ ಸಮನ್ವಯ, ಶಾಂತಿ ಮತ್ತು ಸಹಬಾಳ್ವೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಿಕ್ಷಕ ಶಂಕರ್ ಅವರು ಮಾತನಾಡಿ, ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಗೀತಾ ಕೆ., ಪ್ರತೀಕ್ಷಾ ಆಳ್ವ ಅವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರು, ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.













