ಶಿಕ್ಷಕಿ ಹರಿಣಾಕ್ಷಿಯವರಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ

0

ಉಪ್ಪಿನಂಗಡಿ: ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಡೆಕೊಟ್ಟು ಇಲ್ಲಿನ ಮುಖ್ಯ ಶಿಕ್ಷಕಿ ಹರಿಣಾಕ್ಷಿ ಕೆ. ಯವರಿಗೆ ರಾಜ್ಯ ಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನ ಜ್ಞಾನ ಸೌಧ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೀಡಿ ಗೌರವಿಸಲಾಯಿತು.


ಉಪ್ಪಿನಂಗಡಿಯ ಸರಕಾರಿ ಮಾದರಿ ಶಾಲೆಯಲ್ಲಿ ಶಿಕ್ಷಕಿಯಾಗಿದಂದಿನಿಂದ ಶಿಕ್ಷಣದೊಂದಿಗೆ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಈಗಾಗಲೇ ಎರಡು ಕವನ ಸಂಕಲನಗಳನ್ನು ರಚಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿಯನ್ನು ಮೂಡಿಸುತ್ತಿರುವ ಇವರು ದಾನಿಗಳ ಸಹಕಾರದೊಂದಿಗೆ ಶಾಲೆಗೆ ಅಗತ್ಯವಾಗಿರುವ ಮೂಲಸೌಕರ್ಯಗಳ ಪೂರೈಕೆಯೊಂದಿಗೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಿಗೆ ಹೊಸ ಆಯಾಮವನ್ನು ನೀಡಿದ ಸಾಧಕರಾಗಿಯೂ ಗುರುತಿಸಿಕೊಂಡಿದ್ದಾರೆ.


ಬಹುಮುಖಿ ಪ್ರತಿಭೆಯನ್ನು ಹೊಂದಿರುವ ಇವರು , ಜಿಲ್ಲಾ ಮತ್ತು ವಿಭಾಗಮಟ್ಟದ ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿ, ಆಕರ್ಷಕ ನಿರೂಪಕರಾಗಿ ಗಮನ ಸೆಳೆದಿರುತ್ತಾರೆ. ಹಲವು ಕಾರ್ಯಕ್ರಮಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುವ ಇವರ ಶೈಕ್ಷಣಿಕ , ಸಾಮಾಜಿಕ ಹಾಗೂ ಸಾಹಿತ್ಯಕ ಸಾಧನೆಯನ್ನು ಗುರುತಿಸಿ. ಬೆಂಗಳೂರಿನ ಸದ್ಧರ್ಮ ಸಮನ್ವಯ ನವಭಾರತ ಉದಯ ಪ್ರತಿಷ್ಠಾನದವರು ರಾಜ್ಯ ಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

LEAVE A REPLY

Please enter your comment!
Please enter your name here