







ಪುತ್ತೂರು: ಅರಣ್ಯ ಇಲಾಖೆ ಮಂಗಳೂರು ವಿಭಾಗ, ಪುತ್ತೂರು ಉಪವಿಭಾಗ, ಪುತ್ತೂರು ವಲಯದ ವತಿಯಿಂದ 72ನೇ ವನ್ಯಜೀವಿ ಸಪ್ತಾಹವನ್ನು ಅ.5ರಂದು ನರಿಮೊಗರು ಐಟಿಐನಲ್ಲಿ ಆಚರಿಸಲಾಯಿತು. ಐ.ಟಿ.ಐಯ ಪ್ರಾಂಶುಪಾಲರಾದ ಸುಮಾರಾಣಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.



ಪ್ರಾಸ್ತಾವಿಕವಾಗಿ ಮಾತನಾಡಿದ ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿ ಎಂ ಅವರು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿ ಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪುತ್ತೂರು ವಲಯ ಪರೀಕ್ಷಾರ್ಥ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರುದ್ರೇಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ನಡೆಯಿತು.













