







ಪುತ್ತೂರು: 2026-27ನೇ ಸಾಲಿನಲ್ಲಿ ನಾಗಪುರದ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯುವ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ತೆರಳುವ ಅರ್ಹ ಯಾತ್ರಾರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.


ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಪುತ್ತೂರು ತಾಲೂಕು ಸಹಾಯಕ ನಿರ್ದೇಶಕರು (ಗ್ರೇಡ್-2) ಸೆ.30ರಂದು ಪ್ರಕಟಣೆ ಹೊರಡಿಸಿದ್ದಾರೆ.



ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ಇತರೆ ವರ್ಗದವರು ಅ.19 ರಿಂದ ಅ.22ರವರೆಗೆ ದೀಕ್ಷಾ ಭೂಮಿಗೆ ಭೇಟಿ ನೀಡಲಿದ್ದು, ಸಾರಿಗೆ ವ್ಯವಸ್ಥೆ ಕಲ್ಪಿಸುವ ಸಂಬಂಧ ಅರ್ಹರನ್ನು ಆಯ್ಕೆ ಮಾಡಲಾಗುತ್ತಿದೆ.
ಅರ್ಜಿಯನ್ನು https://swd.karnataka.gov.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಸಲ್ಲಿಸಬಹುದು.ಅ.9ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ .ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆ, ಪುತ್ತೂರು ತಾಲೂಕು, ದ.ಕ ಜಿಲ್ಲೆ, ದೂ: 08251-298803 ಅಥವಾ 9480843115 ಸಂಪರ್ಕಿಸಬಹುದು.










