







ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತಕ್ಕೀಡಾಗಿದ್ದು ಶಾಸಕರು ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಕರಿಕ್ಕಳ ನಿಂತಿಕಲ್ ಮಧ್ಯೆ ಮುಚ್ಚಿಲ ಎಂಬಲ್ಲಿ ಎದುರಿಂದ ಹೋಗುತ್ತಿದ್ದ ಕಾರು ಸಡನ್ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ಇನ್ನೋವಾ ಕಾರು ಎದುರಿನ ಕಾರಿಗೆ ಢಿಕ್ಕಿ ಹೊಡೆದಿದ್ದು ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದ ಶಾಸಕಿ, ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾದರು. ಶಾಸಕರು ಬೇರೊಂದು ಕಾರಿನಲ್ಲಿ ಮನೆಗೆ ತೆರಳಿದರು ಎನ್ನಲಾಗಿದೆ.












