







ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆ ಸ್ಮರಣೆಯ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ಬನ್ನೂರು ಗ್ರಾ.ಪಂ.ನ ಹಿಂದೂ ರುದ್ರ ಭೂಮಿ ಮುಕ್ತಿಧಾಮದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು ತ್ಯಾಗ ಮತ್ತು ಸಮರ್ಪಣಾ ಮನೋಭಾವದಿಂದ ಕಳೆದ 25 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿದ್ದು ಅವರ ಆದರ್ಶ ಜೀವನ ಎಲ್ಲರಿಗೂ ಮಾದರಿಯಾಗಿದೆ, ಅವರ ಹಾದಿಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಸಮಾಜ, ದೇಶದ ಕೆಲಸದಲ್ಲಿ ಸಮರ್ಪಣಾ ಭಾವದಿಂದ ತೊಡಗಿಸಿಕೊಂಡಾಗ ನಮ್ಮ ದೇಶ ವಿಕಸಿತ ಭಾರತ ಆಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.
ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಮತ್ತು ನಗರ ಮಂಡಲದ ಅಧ್ಯಕ್ಷ ಶಿವಕುಮಾರ ಕಲ್ಲಿಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ರೈತ ಮೋರ್ಚಾ ಅಧ್ಯಕ್ಷ ಶರತ್ಚಂದ್ರ ಬೈಪಡಿತ್ತಾಯ, ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಪರಿಸರ ಪ್ರೇಮಿ ಮಾಧವ್ ಉಳ್ಳಾಲ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬನ್ನೂರು ಬೂತ್ ಅಧ್ಯಕ್ಷ ಶಶಿಧರ ಗೌಡ ಕುಂಟ್ಯಾನ, ಬಿಎಲ್ಓ-2 ರಮೇಶ್ ಪೂಜಾರಿ, ಬನ್ನೂರು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಶೀನಪ್ಪ ಕುಲಾಲ್, ಗ್ರಾ.ಪಂ ಮಾಜಿ ಸದಸ್ಯರುಗಳಾದ ಶ್ರೀನಿವಾಸ ಪರ್ವೋಡಿ, ರಮಣಿ ಡಿ ಗಾಣಿಗ, ರಾಘವೇಂದ್ರ, ಪೂವಪ್ಪ ದೇಂತಡ್ಕ, ರತ್ನಾಕರ ಪ್ರಭು ಉಪಸ್ಥಿತರಿದ್ದರು.












