ನರಿಮೊಗರು: ಸೇವಾ ಸಂಕಲ್ಪ ಅಭಿಯಾನ, ಸನ್ಮಾನ ಕಾರ್ಯಕ್ರಮ

0

ನರಿಮೊಗರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 76ನೇ ಜನ್ಮದಿನ ಹಾಗೂ ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳ ಸಾಧನೆಯ ಅಂಗವಾಗಿ ನಡೆಯುತ್ತಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಭಾಗವಾಗಿ ನರಿಮೊಗರು ಹಾಗೂ ಪುರುಷರಕಟ್ಟೆ ಅಂಗನವಾಡಿಯಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಅಂಗನವಾಡಿ ಅಧ್ಯಾಪಕಿಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆ ಸರೋಜ ಅವರನ್ನು ಸನ್ಮಾನಿಸಲಾಯಿತು. ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಯಶೋಧ ಕೆ. ಅವರು ಮಕ್ಕಳಿಗೆ ಪೌಷ್ಟಿಕ ಆಹಾರದ ಮಹತ್ವದ ಕುರಿತು ಮಾಹಿತಿ ನೀಡಿದರು. ಬಳಿಕ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೈತ ಮೋರ್ಚಾ ಅಧ್ಯಕ್ಷ ಶರತ್‌ಚಂದ್ರ ಬೈಪಾಡಿತ್ತಾಯ, ಹಿರಿಯರಾದ ವಸಂತ ಗೌಡ ಸೇರಾಜೆ, ಗ್ರಾಪಂ ಮಾಜಿ ಸದಸ್ಯೆ ಪುಷ್ಪಾವತಿ, ನರಿಮೊಗರು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಡಿ, ಉಪಾಧ್ಯಕ್ಷೆ ಪವಿತ್ರ, ಹಿರಿಯ ಬಿಜೆಪಿ ಕಾರ್ಯಕರ್ತೆ ಲೀಲಾ ಸೇರಿದಂತೆ ಪಕ್ಷದ ಕಾರ್ಯಕರ್ತರು, ಮಹಿಳೆಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here