ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಯೂನಿಮೆಕ್ ಏರೋಸ್ಪೇಸ್ ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ ಯೂನಿಮೆಕ್ ಏರೋಸ್ಪೇಸ್ ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.


ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here