







ಕಡಬ: ಜಾತಿನಿಂದನೆ ಹಾಗೂ ಅವಾಚ್ಯ ಶಬ್ದಗಳಿಂದ ಬೈದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಲ್ಯ ಗ್ರಾಮದ ಪುತ್ತಿಲ ನಿವಾಸಿ ಅನುರಾಧ ಪಿ. ಅವರನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಮುಕ್ತಗೊಳಿಸಿದೆ.


2018ರ ಜನವರಿ 23ರಂದು ಕಡಬ ತಾಲೂಕು ಆಲಂಕಾರು ಗ್ರಾಮದ ಕೇಪುಳು ಮನೆ ಎಂಬಲ್ಲಿ ರಾಘವ ಎಂಬವರಿಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದ ಆರೋಪದ ಮೇರೆಗೆ ಅನುರಾಧ ಪಿ. ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.



ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸಿ, ಆರೋಪಿಯ ವಿರುದ್ಧ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಕ್ರಿಮಿನಲ್ ಕೇಸ್ ನಂ. 5007/2018ರಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಒಟ್ಟು 13 ಸಾಕ್ಷಿಗಳನ್ನು ವಿಚಾರಣೆ ನಡೆಸಿತು. ಆದರೆ ಪ್ರಾಸಿಕ್ಯೂಷನ್ ಪರವಾಗಿ ಆರೋಪ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ, ಸೆ.3 ರಂದು ಆರೋಪಿಯಾಗಿದ್ದ ಅನುರಾಧ ಪಿ. ಅವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.
ಆರೋಪಿಯ ಪರವಾಗಿ ವಕೀಲರಾದ ಲೋಕೇಶ್ ಎಂ.ಜಿ. ಕೋಣಾಜೆ ಮಾಲ, ಕಕ್ಷೆ ಕೃಷ್ಣಪ್ಪ ಗೌಡ, ವಿನಯ ಎಂ.ಕೆ. ಕಳುವಾಜೆ ಹಾಗೂ ಕವನ ಯೇನೆಕಲ್ಲು ವಾದ ಮಂಡಿಸಿದ್ದರು.










