ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ನಿಧನ

0

ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮುದ್ಯ ನಿವಾಸಿ ಸಿಪ್ರಿಯಾನ್ ಡಿ.ಸೋಜರವರ ಪುತ್ರ ಸಚಿನ್ ಡಿ.ಸೋಜ(33ವ.) ಅವರು ಅ.8ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಕೃಷಿಕರಾಗಿದ್ದ ಸಚಿನ್ ಡಿ.ಸೋಜ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಕೆಲ ವರ್ಷಗಳ ಹಿಂದೆ ಸರ್ಜರಿ ಸಹ ಮಾಡಿಕೊಂಡಿದ್ದರು. ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಅ.7ರಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಅ.8ರಂದು ಸಂಜೆ ನಿಧನರಾಗಿದ್ದಾರೆ. ಮೃತರು ತಾಯಿ, ಸಹೋದರಿ, ಪತ್ನಿ ಮತ್ತು ಮಗನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here