







ರಾಮಕುಂಜ: ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.6ರಂದು ರಾತ್ರಿ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ನಡೆದಿದೆ.


ರಾಮಕುಂಜ ಗ್ರಾಮದ ಕೆದಿಲ ನಿವಾಸಿ ಅಶೋಕ ಕೆ.(54ವ.) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಈ ಹಿಂದೆ 5 ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅ.6ರಂದು ಬೆಳಿಗ್ಗೆ ಕೆಲಸಕ್ಕೆ ಹೋದವರು ಮಧ್ಯಾಹ್ನ ಅಮಲು ಪದಾರ್ಥ ಸೇವಿಸಿ ಮನೆಗೆ ಬಂದಿದ್ದರು. ರಾತ್ರಿ 8.30ಕ್ಕೆ ಊಟ ಮಾಡಿ ಪಕ್ಕದಲ್ಲೇ ಇರುವ ಇನ್ನೊಂದು ಮನೆಗೆ ಹೋಗಿದ್ದರು. ರಾತ್ರಿ 10.45ಕ್ಕೆ ಅಶೋಕ ಅವರು ಯಾವುದೋ ವಿಷ ಪದಾರ್ಥ ಸೇವಿಸಿದ ವಾಸನೆ ಬರುತ್ತಿದ್ದು, ವಿಪರೀತ ಕೆಮ್ಮು ಮತ್ತು ಅಶ್ವಸ್ಥತೆಯಿಂದ ಇದ್ದವರನ್ನು ಮನೆಯವರು ಆಂಬುಲೆನ್ಸ್ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ರಾತ್ರಿ 11.34 ಗಂಟೆಗೆ ವೈದ್ಯರು ಪರೀಕ್ಷಿಸಿ ಅಶೋಕ್ ಮೃತ ಪಟ್ಟಿರುವುದಾಗಿ ತಿಳಿಸಿದರು ಎಂದು ವರದಿಯಾಗಿದೆ. ಅಶೋಕ್ ಅವರು ವಿಪರೀತ ಮದ್ಯ ಸೇವನೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ಪತ್ನಿ ವೀಣಾ ಅವರು ನೀಡಿದ ದೂರಿನಂತೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



ಅಶೋಕ್ ಅವರು ಈ ಹಿಂದೆ ವಿದೇಶದಲ್ಲಿ ಉದ್ಯೋಗದ್ದಲ್ಲಿದ್ದು ಆ ಬಳಿಕ ಊರಿಗೆ ಬಂದು ಟೈಲರಿಂಗ್ ವೃತ್ತಿ ಮಾಡುತ್ತಿದ್ದರು. ಬಳಿಕ ಟೈಲರ್ ವೃತ್ತಿ ಬಿಟ್ಟು ಕೆಲ ವರ್ಷಗಳಿಂದ ಕೂಲಿ ಕೆಲಸ ಮಾಡುತ್ತಿದ್ದರು. ಇವರು ಪತ್ನಿ ವೀಣಾ, ಪುತ್ರಿಯರಾದ ಚಾಂದಿನಿ, ದೃಷ್ಟಿ, ಪುತ್ರ ಪ್ರಜ್ವಲ್ ಅವರನ್ನು ಅಗಲಿದ್ದಾರೆ.










