ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ನೂತನ 250 ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

0

​ವಿಟ್ಲ: ಗುಣಮಟ್ಟದ ವೈದ್ಯಕೀಯ ಶಿಕ್ಷಣ ನೀಡುವುದು ಹಾಗೂ ಸಮಾಜಸೇವೆ ಸಲ್ಲಿಸುವುದು ನಮ್ಮ ಸಂಸ್ಥೆಯ ಮೂಲ ಧ್ಯೇಯ, ಉದ್ದೇಶವಾಗಿದೆ. ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ವೃತ್ತಿ ಜೀವನವನ್ನು ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವದಿಂದ ರೂಪಿಸಿಕೊಳ್ಳಬೇಕು ಎಂದು ಕಣಚೂರು ಇಸ್ಲಾಮಿಕ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಹೇಳಿದರು.


ಅವರು ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜರುಗಿದ 2026ರ ಪ್ರಥಮ ಸಾಲಿನ 250 ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಿಗಾಗಿ ಸಾಂಪ್ರದಾಯಿಕ ಓರಿಯೆಂಟೇಶನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹಿಮಾನ್ ಮಾತನಾಡಿ, ಕಾಲೇಜಿನ ಮೂಲಸೌಕರ್ಯ, ಶಿಸ್ತು, ಹಾಸ್ಟೆಲ್ ಸೌಲಭ್ಯಗಳು ಮತ್ತು ಭದ್ರತಾ ವ್ಯವಸ್ಥೆಗಳ ಕುರಿತು ಸಮಗ್ರ ಮಾಹಿತಿ ನೀಡಿ, ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಆಡಳಿತ ಮಂಡಳಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿ ಮಾಡುವ ಕೆಲಸವಾಗಲಿ ಎಂದರು.


ಸಂಸ್ಥೆಯ ಡೀನ್ ಡಾ. ಶಹನವಾಜ್ ಮಣಿಪಾಡಿ ಸ್ವಾಗತಿಸಿ, ಕಾಲೇಜು ಆವರಣದಲ್ಲಿ ರ್‍ಯಾಗಿಂಗ್, ಗುಂಪು ಹೊಡೆದಾಟ, ಮಾದಕ ವಸ್ತುಗಳ ಸೇವನೆ ಹಾಗೂ ಅಶಿಸ್ತಿನ ವರ್ತನೆಗೆ ಸಂಪೂರ್ಣ ನಿಷೇಧವಿದ್ದು, ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಲಾಗುತ್ತಿದೆ ಎಂದು ಸೂಚಿಸಿದರು. ಕಣಚೂರು ಆರೋಗ್ಯ ವಿಜ್ಞಾನ ಸಲಹಾ ಸಮಿತಿ ಅಧ್ಯಕ್ಷ ಡಾ. ಮೊಹಮ್ಮದ್ ಇಸ್ಮಾಯಿಲ್, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಎಸ್. ಮೋನಿಸ್, ಕಣಚೂರು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅಂಜನ್ ಕುಮಾರ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸಕೀನಾ ಹಾಗೂ ಇರ್ಫಾನ್ ನಿರೂಪಿಸಿದರು. ಅಂಗ ವಿಚ್ಛೇದನ ತಂತ್ರಶಾಸ್ತ ವಿಭಾಗದ ಮುಖ್ಯಸ್ಥ ಡಾ. ರೋಷನ್ ವಂದಿಸಿದರು.

LEAVE A REPLY

Please enter your comment!
Please enter your name here