ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಆಯ್ಕೆ ಸಮಿತಿಗೆ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ನೇಮಕ

0

ಪುತ್ತೂರು : ಕರ್ನಾಟಕದ ನಾಡು-ನುಡಿಗೆ ಸೇವೆ ಸಲ್ಲಿಸಿದ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳು ಮತ್ತು ಸಂಘ-ಸಂಸ್ಥೆಗಳಿಗೆ ಕರ್ನಾಟಕ ಸರ್ಕಾರವು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ನೀಡಿ ಗೌರವಿಸುತ್ತದೆ.

ಈ ವರ್ಷದ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ಸರ್ಕಾರ ಆಯ್ಕೆ ಸಮಿತಿಯನ್ನು ರಚಿಸಿದ್ದು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here