








ಕೌಡಿಚ್ಚಾರ್: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚ್ಚಾರ್ ಸಮೀಪದ ಮಿನೋಜುಕಲ್ ಎಂಬಲ್ಲಿ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದೆ.



ಮರ ಬಿದ್ದ ರಭಸಕ್ಕೆ 3 ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.




ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ, ಮೆಸ್ಕಾಂ, ಅಗ್ನಿಶಾಮಕ, ಪುತ್ತೂರು ಗ್ರಾಮಾಂತರ ಪೊಲೀಸರು ಆಗಮಿಸಿ ಕೌಡಿಚ್ಚಾರ್ ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.










