ಮಧುರಾ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕರ ಕಾರ್ಯಾಗಾರ

0

ಪುತ್ತೂರು: ಮೇನಾಲ ಮಧುರಾ ಇಂಟರ್‌ನ್ಯಾಷನಲ್ ಶಾಲೆಯ ವತಿಯಿಂದ ತರಗತಿ ನಿರ್ವಹಣೆ ಮತ್ತು ಪರಿಣಾಮಕಾರಿ ಸಂವಹನ ಕೌಶಲ್ಯಗಳ ಕುರಿತು ಶಿಕ್ಷಕರ ಕಾರ್ಯಾಗಾರ ಅ.5ರಂದು ಶಾಲಾ ಆವರಣದಲ್ಲಿ ನಡೆಯಿತು.ಸುಳ್ಯದ ಅಂಜಲಿ ಮಾಂಟೆಸ್ಸರಿ ಶಾಲೆಯ ಸಂಚಾಲಕಿ ಗೀತಾಂಜಲಿ ಟಿ.ಜಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಶಿಕ್ಷಕರ ವೃತ್ತಿಪರ ಕೌಶಲ್ಯಗಳನ್ನು ವೃದ್ಧಿಸುವುದು, ತರಗತಿ ನಿರ್ವಹಣಾ ವಿಧಾನಗಳನ್ನು ಸುಧಾರಿಸುವುದು ಹಾಗೂ ವಿದ್ಯಾರ್ಥಿಗಳೊಂದಿಗೆ ಪರಿಣಾಮಕಾರಿಯಾಗಿ ಸಂವಹನ ನಡೆಸುವ ಕೌಶಲ್ಯಗಳನ್ನು ಬೆಳೆಸುವುದು ಕಾರ್ಯಾಗಾರದ ಉದ್ದೇಶವಾಗಿತ್ತು.

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವುದು, ಶಿಕ್ಷಕ-ವಿದ್ಯಾರ್ಥಿಗಳ ನಡುವೆ ಉತ್ತಮ ಸಂಬಂಧ ಬೆಳೆಸುವುದು, ತರಗತಿಯಲ್ಲಿನ ವಿವಿಧ ಸನ್ನಿವೇಶಗಳನ್ನು ಸಮರ್ಥವಾಗಿ ನಿಭಾಯಿಸುವುದು ಹಾಗೂ ಸ್ಪಷ್ಟವಾಗಿ ಮತ್ತು ಆತ್ಮವಿಶ್ವಾಸದಿಂದ ಸಂವಹನ ನಡೆಸುವ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಿದರು. ಅಲ್ಲದೇ ನವೀನ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ತರಗತಿಯನ್ನು ಹೆಚ್ಚು ಆಸಕ್ತಿದಾಯಕ, ಸಂವಾದಾತ್ಮಕ ಮತ್ತು ವಿದ್ಯಾರ್ಥಿ ಸ್ನೇಹಿಯಾಗಿಸುವ ಕುರಿತು ಪ್ರಾಯೋಗಿಕ ಸಲಹೆಗಳನ್ನು ನೀಡಿದರು.

LEAVE A REPLY

Please enter your comment!
Please enter your name here