









ನಿಡ್ಪಳ್ಳಿ:ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಡಿ.12 ಮತ್ತು 13 ರಂದು ನಡೆಯುವ ಗಿರಿಜಾ ಕಲ್ಯಾಣೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಪಾಣಾಜೆಯ ಆರ್ಲಪದವು ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ಅ.8 ರಂದು ನಡೆಯಿತು.




ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷ ಶ್ರೀರಾಮ್ ಭಟ್ ಪಾತಾಳ,ಟ್ರಸ್ಟ್ ನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ,ಗಿರಿಜಾ ಕಲ್ಯಾಣೋತ್ಸವ ಸಮಿತಿ ಅದ್ಯಕ್ಷ ಡಾ| ಅಖಿಲೇಶ್ ಪಾಣಾಜೆ, ಕಾರ್ಯಾದ್ಯಕ್ಷರಾದ ಅನಿಲ್ ಕಣ್ಣರ್ನೂಜಿ,ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ,
ರಣಮಂಗಲ ಸುಬ್ರಹ್ಮಣ್ಯ ದೇವಸ್ಥಾನ ಪಾಣಾಜೆ ಇದರ ಆಡಳಿತ ಮೊಕ್ತೇಸರರಾದ ಶ್ರೀಕೃಷ್ಣ ಬೋಳಿಲ್ಲಾಯ,ಪಾಣಾಜೆ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಉಮೇಶ್ ರೈ ಗಿಳಿಯಾಲು, ರಣಮಂಗಲ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅದ್ಯಕ್ಷ ಲಕ್ಷೀನಾರಾಯಣ ರೈ ಕೆದಂಬಾಡಿ, ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕ ರವಿಶಂಕರ ಶರ್ಮ ಬೊಳುಕಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗಿರಿಜಾ ಕಲ್ಯಾಣೋತ್ಸವದ ಆರ್ಥಿಕ ಸಮಿತಿಯ ಸಂಚಾಲಕರಾದ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು ಸ್ವಾಗತಿಸಿ, ವಸಂತ ಭರಣ್ಯ ವಂದಿಸಿದರು. ಪ್ರದೀಪ್ ಪಾಣಾಜೆ ಕಾರ್ಯಕ್ರಮ ನಿರೂಪಿಸಿದರು.ಗ್ರಾಮಸ್ಥರು ಪಾಲ್ಗೊಂಡರು.










