ಅ.11 : ನೆಲ್ಯಾಡಿ ಹೊಸಮಜಲುನಲ್ಲಿ ಉಚಿತ ದಂತ ತಪಾಸಣೆ, ಚಿಕಿತ್ಸಾ ಶಿಬಿರ

0

ನೆಲ್ಯಾಡಿ: ಸಂತಜಾರ್ಜ್ ವಿದ್ಯಾಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ದೇರಳಕಟ್ಟೆಯ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಸಮುದಾಯ ದಂತ ಆರೋಗ್ಯ ವಿಭಾಗದ ಸಹಯೋಗದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಅ.11ರಂದು ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.


ಬೆಳಗ್ಗೆ 10 ಗಂಟೆಯಿಂದ ಶಿಬಿರ ಆರಂಭವಾಗಲಿದ್ದು, ಸಾರ್ವಜನಿಕರಿಗೆ ಉಚಿತವಾಗಿ ದಂತ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಾಗುತ್ತದೆ. ಸಾರ್ವಜನಿಕರು ಈ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಎನ್‌ಎಸ್‌ಎಸ್ ಶಿಬಿರಾಧಿಕಾರಿ ವಿಶ್ವನಾಥ ಶೆಟ್ಟಿ ಕೆ. ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here