







ನಿಡ್ಪಳ್ಳಿ; ಇಲ್ಲಿಯ ಶ್ರೀ ಶಾಂತದುರ್ಗಾ ದೇವಾಲಯದಲ್ಲಿ ನವರಾತ್ರಿ ಉತ್ಸವ ಅ.11 ರಿಂದ 21 ರವರೆಗೆ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.


ಅ.11 ರಂದು ಬೆಳಿಗ್ಗೆ ಗಂಟೆ 8 ರಿಂದ ಮಹಾಗಣಪತಿ ಹವನ ನಂತರ ದೇವರಿಗೆ ಪಂಚವಿಂಶತಿ ಕಲಶ.ಗಂಟೆ 10 ರಿಂದ ನವರಾತ್ರಿ ಉತ್ಸವಕ್ಕೆ ಚಾಲನೆ ಯಶಸ್ವಿ ಇಂಜಿನಿಯರ್ಸ್ ಬೈಕಂಪಾಡಿ ಇದರ ಆಡಳಿತ ಪಾಲುದಾರ ದಿನೇಶ್ ಕುಮಾರ್ ಪಳಂಬೆ ಇವರಿಂದ. ನಂತರ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ. ರಾತ್ರಿ ಗಂಟೆ 7 ರಿಂದ ವಿಶೇಷ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿರುವುದು.




ಅ.16 ರಂದು ಬೆಳಿಗ್ಗೆ ಗಂಟೆ 9 ರಿಂದ ಸಾಮೂಹಿಕ ಚಂಡಿಕಾ ಹೋಮ.ಅ.18 ರಂದು ಬೆಳಿಗ್ಗೆ ಗಂಟೆ 9 ರಿಂದ ಹಿಂದೂ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆಗಳು.ಅ.20 ರಂದು ವಿಶೇಷ ಆಯುಧ ಪೂಜೆ.ಸಂಜೆ ಗಂಟೆ 6 ರಿಂದ ಸಾಮೂಹಿಕ ದುರ್ಗಾಪೂಜೆ.ಅ.21 ರಂದು ಬೆಳಿಗ್ಗೆ ಗಂಟೆ 8 ಕ್ಕೆ ಕದಿರು ತುಂಬಿಸುವುದು ಗಂಟೆ 10 ರಿಂದ ಅಕ್ಷರಾಭ್ಯಾಸ, ಮಧ್ಯಾಹ್ನ ವಿಜಯದಶಮಿ ಪ್ರಯುಕ್ತ ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ.ಪ್ರತಿದಿನ ರಾತ್ರಿ ಗಂಟೆ 8 ಕ್ಕೆ ವಿಶೇಷ ಅಲಂಕಾರ ಪೂಜೆ, ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಭಜನಾ ಸಂಘಗಳಿಂದ ಭಜನಾ ಕಾರ್ಯಕ್ರಮ ನಡೆಯುತ್ತದೆ.ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯಲಿರುವುದು.
ಸಾಂಸ್ಕೃತಿಕ ಕಾರ್ಯಕ್ರಮಗಳು;
ಅ.13 ರಂದು ರಾತ್ರಿ ಗಂಟೆ 9 ರಿಂದ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ ಪ್ರಸಂಗ ಶಾಂಭವಿ ವಿಜಯ. ಅ.16 ರಂದು ರಾತ್ರಿ ಗಂಟೆ 9 ರಿಂದ ಪ್ರಿಯದರ್ಶಿನಿ ಅಂಗ್ಲ ಮಾಧ್ಯಮ ಶಾಲೆ ಬೆಟ್ಟಂಪಾಡಿ ಇಲ್ಲಿನ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಶ್ರೀ ಶಾಂತದುರ್ಗಾ ಟ್ರಸ್ಟ್ ಹಾಗೂ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ 11 ರಿಂದ 21 ರವರೆಗೆ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ.ಮಧ್ಯಾಹ್ನ ಮತ್ತು ರಾತ್ರಿ ಪ್ರತಿದಿನ ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿರುವುದು.










