







ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು ಭೋಜನ ಪಾಕಶಾಲೆ, ಪ್ರಧಾನ ಸೋಪಾನ ಲೋಕಾರ್ಪಣಾ ಕಾರ್ಯಕ್ರಮ ಅ.11ರಂದು ಬೆಳಿಗ್ಗೆ ನಡೆಯಲಿದೆ.


ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಲೋಕಾರ್ಪಣೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ| ಟಿ. ಶ್ಯಾಮ್ ಭಟ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಆಗಮಿಸಲಿದ್ದಾರೆ.



ಆಡಳಿತ ಮಂಡಳಿ ಅಧ್ಯಕ್ಷ ಪ್ರವೀಣ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದು, ವಿವಿಧ ಪ್ರಮುಖರ ಗೌರವ ಉಪಸ್ಥಿತಿಯೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.










