ಸಹಕಾರ ಮಹಾಮಂಡಳಿಯ ನಿರ್ದೇಶಕರಾಗಿ ಅವಿರೋಧ ಆಯ್ಕೆ

0

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದಿಂದ ಸನ್ಮಾನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಯ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿ ಅ.10ರಂದು ಬೆಳಿಗ್ಗೆ ದರ್ಬೆಯ ಪ್ರಶಾಂತ್ ಮಹಾಲ್‌ನ ಸೆನೆಟ್ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಹೂವಿನ ಹಾರ, ಪೇಟ, ಫಲಪುಷ್ಪ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here