ನಾಳೆ(ಅ.11) ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆಮ್ಮಿಂಜೆ ವಲಯದ ಒಕ್ಕೂಟದಿಂದ ಶ್ರೀ ಸತ್ಯನಾರಾಯಣ ಪೂಜೆ, ಒಕ್ಕೂಟಗಳ ಪದಗ್ರಹಣ

0

ಪುತ್ತೂರು:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಕೆಮ್ಮಿಂಜೆ ವಲಯದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ ಸಮಾರಂಭವು ಅ.11ರಂದು ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನದ ಗೌರಿಶಂಕರ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 8 ಗಂಟೆಗೆ ಶ್ರೀಸತ್ಯನಾರಾಯಣ ಪೂಜೆ ಪ್ರಾರಂಭ, ಇದೇ ಸಮಯದಲ್ಲಿ ಭಜನೆ, ಕುಣಿತ ಭಜನೆ, ನಂತರ ಮಹಾಪೂಜೆ ನಡೆದ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ.


ಸಭಾ ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಕೆಮ್ಮಿಂಜೆ ವಲಯದ ಅಧ್ಯಕ್ಷ ಸುಂದರ ಬಲ್ಯಾಯ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶಶಿಧರ್ ಎಂ., ಡಿವೈಎಸ್‌ಪಿ ಪ್ರಮೋದ್ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ಅರುಣ್ ಕುಮಾರ್ ಪುತ್ತಿಲ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಉದಯ ಕುಮಾರ್ ಜಿ.ಕೆ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಅನ್ನಸಂತರ್ಪಣೆ ನಡೆದು ನಂತರ ಕೆಮ್ಮಿಂಜೆ ವಲಯದ ಒಕ್ಕೂಟದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಒಕ್ಕೂಟದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here