







ಪುತ್ತೂರು: ಪುತ್ತೂರು ಮುಖ್ಯರಸ್ತೆಯಲ್ಲಿರುವ ವಾಸ್ತವ್ಯವಿಲ್ಲದ ಹಳೆಯ ಮನೆಯೊಂದಕ್ಕೆ ಅ.11ರ ನಸುಕಿನ ಜಾವ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ.


ಪುತ್ತೂರು ಸೋಜಾ ಅಲ್ಯೂಮಿನಿಯಂ ಸಂಸ್ಥೆಯ ಎದುರಿನಲ್ಲಿರುವ ಹಳೆಯ ಮನೆಯೊಂದರಲ್ಲಿ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.













