







ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ನೆಹರುನಗರದಲ್ಲಿರುವ ಸುದಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆಗೈದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನಿಕಾ ಯು. ಅವರು 50 ಮೀ, 100 ಮೀ ಹಾಗೂ 200 ಮೀ ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧೆಗಳಲ್ಲಿ ಚಿನ್ನದ ಪದಕ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಿಹಾರಿಕಾ ಅವರು 50 ಮೀ ಫ್ರೀಸ್ಟೈಲ್ ಈಜು ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆದ್ದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.



ವಿದ್ಯಾರ್ಥಿನಿಯರ ಈ ಸಾಧನೆಗೆ ಸುದಾನ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆಗಳನ್ನು ಸಲ್ಲಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಕಾಲೇಜಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.










