72ನೇ ವರ್ಷದ ಪುತ್ತೂರು ದಸರಾ ನಾಡಹಬ್ಬ ಉದ್ಘಾಟನೆ

0

ಪುತ್ತೂರು: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ದಸರಾ ನಾಡಹಬ್ಬ ಸಮಿತಿ ವತಿಯಿಂದ ವೈಚಾರಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀಮಹಾಲಿಂಗೇಶ್ವರ ಸಭಾಭವನದ ನಟರಾಜ ವೇದಿಕೆಯಲ್ಲಿ ನಡೆಯಲಿರುವ 72ನೇ ವರ್ಷದ ಪುತ್ತೂರು ದಸರಾ ನಾಡಹಬ್ಬ ಅ.11ರಂದು ಉದ್ಘಾಟನೆಗೊಂಡಿತು.


ಶ್ರೀಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪಯ್ಯ ಸಂದರ್ಭೋಚಿತವಾಗಿ ಮಾತನಾಡಿದರು. ದಸರಾ ನಾಡಹಬ್ಬ ಸಮಿತಿ ಗೌರವಾಧ್ಯಕ್ಷ ಎನ್.ಕೆ.ಜಗನ್ನೀವಾಸ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪಯ್ಯರವರನ್ನು ದಸರಾ ನಾಡಹಬ್ಬ ಸಮಿತಿಯಿಂದ ಸನ್ಮಾನಿಸಲಾಯಿತು. ಅಕ್ಷರ ಕೆ.ಸಿ. ಪ್ರಾರ್ಥಿಸಿ, ಸಮಿತಿ ಅಧ್ಯಕ್ಷ ಎಂ.ಟಿ.ಜಯರಾಮ ಭಟ್ ಸ್ವಾಗತಿಸಿ ಕಾರ್ಯದರ್ಶಿ ಡಾ|ವಿಜಯ ಸರಸ್ವತಿ ಬಿ. ವಂದಿಸಿದರು. ನ್ಯಾಯವಾದಿ ಗಿರೀಶ್ ಮಳಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಪ್ರಣತಿ ಚೈತನ್ಯ ಪದ್ಯಾಣರವರ ಪದಯಾನ ತಂಡದವರಿಂದ ಭರತನಾಟ್ಯ ಕಾರ್ಯಕ್ರಮ ನೃತ್ಯಧಾರೆ ನಡೆಯಿತು.

LEAVE A REPLY

Please enter your comment!
Please enter your name here