







ವಿಟ್ಲ: ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕೊಳ್ನಾಡು ಗ್ರಾಮದ ಕುಳಾಲು ಬೊಳ್ಪಾದೆ ತಿರುವಿನಲ್ಲಿ ನಡೆದಿದೆ. ಘಟನೆಯಿಂದಾಗಿ ದ್ವಿಚಕ್ರ ವಾಹನ ಸವಾರರೋರ್ವರು ಗಾಯಗೊಂಡಿದ್ದಾರೆ. ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ ರಾಮಣ್ಣ ಮೂಲ್ಯ (45 ವ.) ರವರು ಗಾಯಗೊಂಡವರು.


ವೃತ್ತಿಯಲ್ಲಿ ಮೇಸ್ತ್ರೀಯಾಗಿರುವ ರಾಮಣ್ಣ ಮೂಲ್ಯರವರು ಕುಡ್ತಮುಗೇರು ಕಡೆಯಿಂದ ಕುಳಾಲು ಕಡೆಗೆ ಆಕ್ಟಿವಾದಲ್ಲಿ ತೆರಳುತ್ತಿದ್ದಾಗ, ಬೊಳ್ಪಾದೆಯ ತಿರುವಿನಲ್ಲಿ ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು, ರಾಮಣ್ಣ ಮೂಲ್ಯ ಅವರ ಬಲಗೈ ಮೂಳೆ ಮುರಿದಿದೆ. ಡಿಕ್ಕಿಯ ಬಳಿಕ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯವರು ಗಾಯಾಳುವನ್ನು ವಿಟ್ಲದ ಬೆನಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.













