







ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಣಿಯೂರು ಇದರ ಸದಸ್ಯರಾದ ಕುಸುಮಾವತಿ ಕೆನ್ನಾರು ಕಾಣಿಯೂರು ರವರು ಇತ್ತೀಚಿಗೆ ನಿಧನರಾಗಿದ್ದು, ಇವರ ಮಗ ಮೋಹನರವರಿಗೆ ಸಂಘದ ಸಾರ್ವಜನಿಕ ಉಪಕಾರ ನಿಧಿಯಿಂದ ಧನ ಸಹಾಯದ ಚೆಕ್ ನ್ನು ಸಂಘದ ಅಧ್ಯಕ್ಷ ಗಣೇಶ್ ಉದನಡ್ಕರವರು ಸಂಘದ ಪ್ರಧಾನ ಕಛೇರಿ ಕಾಣಿಯೂರುನಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಫದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ನಿರ್ದೇಶಕರಾದ ಅನಂತ ಕುಮಾರ್ ಬೈಲಂಗಡಿ, ರಮೇಶ್ ಉಪ್ಪಡ್ಕ, ಸುಂದರ ದೇವಸ್ಯ, ಪರಮೇಶ್ವರ ಅನಿಲ, ದಿವಾಕರ ಮರಕ್ಕಡ, ಲೋಕೇಶ್ ಆತಾಜೆ, ಶೀಲಾವತಿ ಮುಗರಂಜ, ವೀಣಾ ಅಂಬುಲ, ರತ್ನಾವತಿ ಮುದ್ವ,ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ ಗೌಡ ರವರು ಉಪಸ್ಥಿತರಿದ್ದರು.












