







ನವರಾತ್ರಿ ಸಂಭ್ರಮಕ್ಕೆ ಸಾಕ್ಷಿಯಾದ 21 ಗ್ರಾಮಗಳ ಮಾಗಣೆ ಕ್ಷೇತ್ರ


ಕಾಣಿಯೂರು: ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕಿನ 21 ಗ್ರಾಮಗಳ ಮಾಗಣೆ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಅಂಗವಾಗಿ ಅ. 13ರಂದು ಮಧ್ಯಾಹ್ನ ಹಾಗೂ ರಾತ್ರಿ ಭಕ್ತರ ಮಹಾಪೂರವೇ ಹರಿದುಬಂತು.ಕ್ಷೇತ್ರಕ್ಕೆ ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ದೇವಿಯ ದರ್ಶನ ಪಡೆದು ರಂಗಪೂಜೆ ಸಹಿತ ವಿವಿಧ ಸೇವೆಗಳನ್ನು ಸಮರ್ಪಿಸಿದರು.



ಮಧ್ಯಾಹ್ನದಿಂದಲೇ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗತೊಡಗಿದ್ದು, ರಾತ್ರಿ ವೇಳೆಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದರು. ಶ್ರೀ ಜಲದುರ್ಗಾದೇವಿಯ ದರ್ಶನ ಪಡೆದು ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದ ಭಕ್ತರು, ವಿವಿಧ ಸೇವೆಗಳನ್ನು ಸಮರ್ಪಿಸಿ ದೇವಿಯ ಕೃಪೆಗೆ ಪಾತ್ರರಾದರು. ಭಕ್ತರ ನಿರಂತರ ಆಗಮನದಿಂದ ದೇವಸ್ಥಾನದ ಪರಿಸರದಲ್ಲಿ ನವರಾತ್ರಿ ಸಂಭ್ರಮ ಕಳೆಗಟ್ಟಿತ್ತು.
21 ಗ್ರಾಮಗಳ ಮಾಗಣೆ ಕ್ಷೇತ್ರವಾಗಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನವು ಸುತ್ತಮುತ್ತಲಿನ ಗ್ರಾಮಗಳ ಭಕ್ತರ ಪ್ರಮುಖ ಆರಾಧನಾ ಕೇಂದ್ರವಾಗಿದೆ. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಎರಡೂ ಹೊತ್ತಿನಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಕ್ಷೇತ್ರದಲ್ಲಿ ಧಾರ್ಮಿಕ ವಾತಾವರಣ ಮನೆಮಾಡಿತ್ತು.ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುನಿಲ್ ಕುಮಾರ್ ರೈ ಪೆರುವಾಜೆ ಗುತ್ತು ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.










