ಬೆಟ್ಟಂಪಾಡಿ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಮತ್ತು ಸಿ.ಪಿ.ಅರ್ ಕಾರ್ಯಾಗಾರ

0

ಬೆಟ್ಟಂಪಾಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿಯಲ್ಲಿ ಅ.14 ರಂದು ಪ್ರಥಮ ಚಿಕಿತ್ಸೆ ಮತ್ತು ಹೃದಯ ಸ್ತಂಭನದ ಸಂದರ್ಭದಲ್ಲಿ ಜೀವ ಉಳಿಸಲು ನೆರವಾಗುವ ಸಿ ಪಿ ಆರ್ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಮಂಗಳೂರು ಹಾಗೂ ಸೇಂಟ್ ಜಾನ್ಸ್ ಆಂಬ್ಯುಲೆನ್ಸ್ ಇಂಡಿಯಾದ ಹಿರಿಯ ತರಬೇತುದಾರರಾದ ಡಾ. ರಾಮಚಂದ್ರ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪ್ರಥಮ ಚಿಕಿತ್ಸೆ ಮತ್ತು ಸಿಪಿಆರ್‌ನ ಮಹತ್ವ, ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಅಮೂಲ್ಯ ಜೀವವನ್ನು ಉಳಿಸುವಲ್ಲಿ ಪ್ರತಿಯೊಬ್ಬರೂ ವಹಿಸಬಹುದಾದ ಪಾತ್ರದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಾಮೋದರ ಕಣಜಾಲು ಅವರು ಮಾತನಾಡಿ, ತುರ್ತು ಸಂದರ್ಭಗಳಲ್ಲಿ ಸೂಕ್ತ ಸಮಯದಲ್ಲಿ ನೀಡುವ ಪ್ರಥಮ ಚಿಕಿತ್ಸೆ ವ್ಯಕ್ತಿಯ ಜೀವ ರಕ್ಷಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತೀಯ ವಿಕಾಸ್ ಟ್ರಸ್ಟ್, ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್, ಪುತ್ತೂರು ರೆಡ್‌ಕ್ರಾಸ್ ಸೊಸೈಟಿಯ ಆಸ್ಕರ್ ಆನಂದ್ ಹಾಗೂ ನಮ್ಮ ಹಬ್ಬ ನಮ್ಮ ಸೇವೆ ರೋಟರಿ ಜಿಲ್ಲೆ 3181ರ ಉಪಾಧ್ಯಕ್ಷ ರೊಟೇರಿಯನ್ ಮೌನೇಶ್ ವಿಶ್ವಕರ್ಮ ಅವರು ಪ್ರಥಮ ಚಿಕಿತ್ಸೆ, ಮಾನವೀಯ ಮೌಲ್ಯಗಳು ಹಾಗೂ ಸಮಾಜಸೇವೆಯ ಮಹತ್ವದ ಕುರಿತು ಮಾತನಾಡಿದರು.

  ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ. ರಾಮಚಂದ್ರ ಕೆ. ಹಾಗೂ ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕ ರಾಮ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಮೈತ್ರಿ ಭಟ್ ಸ್ವಾಗತಿಸಿದರು. ಕುಮಾರಿ ಅನಿತಾ, ಅಕ್ಷತಾ ಹಾಗೂ ತನುಶ್ರೀ ಪ್ರಾರ್ಥಿಸಿದರು. ಪ್ರೊ. ರಾಮಚಂದ್ರ ಕೆ. ವಂದಿಸಿದರು. ಕಾಲೇಜಿನ ಗ್ರಂಥಪಾಲಕರಾದ ರಾಮ ಕೆ. ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಾಗಾರದಲ್ಲಿ ಪ್ರಥಮ ಹಾಗೂ ದ್ವಿತೀಯ ಪದವಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು. ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಬೆಳೆಸುವುದರ ಜೊತೆಗೆ, ಜೀವ ರಕ್ಷಣೆ ಮತ್ತು ಮಾನವೀಯ ಸೇವೆಯ ಕುರಿತು ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಗಲಿವೆ.

LEAVE A REPLY

Please enter your comment!
Please enter your name here