







ಪುತ್ತೂರು: ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಪುತ್ತೂರಿನ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಅಧ್ಯಕ್ಷ ಜಿ.ಎಲ್. ಬಲರಾಮ ಆಚಾರ್ಯ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಭಾಗವಹಿಸಲಿದ್ದಾರೆ.



1994ರಲ್ಲಿ ಆರಂಭಗೊಂಡಿರುವ ಪ್ರವೀಣ್ ಕ್ಯಾಪಿಟಲ್, ಗ್ರಾಹಕರ ಬೆಂಬಲ ಮತ್ತು ವಿಶ್ವಾಸದೊಂದಿಗೆ ತನ್ನ ಸೇವೆಯನ್ನು ಮುಂದುವರಿಸುತ್ತಿದೆ. ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಪ್ರಧಾನ ಕಚೇರಿಯನ್ನು ನವೀಕರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸತ್ಯಶಂಕರ್, ಕಾರ್ಯನಿರ್ವಾಹಕ ನಿರ್ದೇಶಕಿ ರಂಜಿತಾ ಶಂಕರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮೋಘ್ ಜೆ. ರೈ ಅವರು ಕಾರ್ಯಕ್ರಮಕ್ಕೆ ಗಣ್ಯರು, ಗ್ರಾಹಕರು ಹಾಗೂ ಹಿತೈಷಿಗಳನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.










