ಪುತ್ತೂರು: ಅಪ್ರಾಪ್ತ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣ : ಆರೋಪಿಗೆ 20 ವರ್ಷ ಜೈಲು- 6 ಲಕ್ಷ ರೂ ಪರಿಹಾರಕ್ಕೆ ಆದೇಶ

0

ಪುತ್ತೂರು: ಕಡಬ ತಾಲೂಕು ರಾಮಕುಂಜ ಗ್ರಾಮದ ಶೇಖರ @ ಸೇಸಪ್ಪ ಎಂಬಾತನಿಗೆ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

04.10.2020 ರಿಂದ 07.02.2021 ರ ಅವಧಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿದ್ದ ಉಮೇಶ್ ವೈ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದಲ್ಲಿ 20 ಸಾಕ್ಷಿಗಳ ವಿಚಾರಣೆ ನಡೆಸಿದ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿ ಅವರು ತೀರ್ಪು ನೀಡಿದ್ದಾರೆ.

ಪೋಕ್ಸೋ ಕಾಯ್ದೆ 5(ಎಲ್) ರೆ/ವಿ 6ರಡಿ 20 ವರ್ಷ ಕಠಿಣ ಶಿಕ್ಷೆ ಮತ್ತು 25,000 ರೂ. ದಂಡ, ಭಾ.ದಂ.ಸಂ 506ರಡಿ 1 ವರ್ಷ ಸಾದಾ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ 1 ವರ್ಷ ಶಿಕ್ಷೆ ಅನುಭವಿಸಬೇಕು. ಸಂತ್ರಸ್ತ ಬಾಲಕಿಗೆ 6 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ. ಸರ್ಕಾರದ ಪರ ವಿಶೇಷ ಅಭಿಯೋಜಕ ಕುಡ್ರಿಯ ಪುಷ್ಪರಾಜ್ ಆಡ್ಯಂತಾಯ ವಾದಿಸಿದ್ದರು.

LEAVE A REPLY

Please enter your comment!
Please enter your name here