











ಪುತ್ತೂರು: ಕುಂಜೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಸೋಮವಾರ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವಿದ್ಯಾರ್ಥಿಗಳಿಂದ ‘ನೃತ್ಯೋಹಂ’ ನೃತ್ಯ ಪ್ರದರ್ಶನ ಏರ್ಪಟ್ಟಿತು. ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ಭರತನಾಟ್ಯ ಪ್ರದರ್ಶನ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗನ್ನಾಥ ರೈ ಅವರು ಕಲಾವಿದರಿಗೆ ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು.












