ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಬೆಂಬಲ ಕೋರಿ ಪುತ್ತೂರು ವಕೀಲರಿಗೆ ಆಹ್ವಾನ

0

ಪುತ್ತೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಕೋರಿ ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳು ಮತ್ತು ಹಿರಿಯ ವಕೀಲರನ್ನು ಭೇಟಿ ಮಾಡಿ ಸಮಾಲೋಚನಾ ಸಭೆಗೆ ಆಹ್ವಾನಿಸಲಾಯಿತು.

UNITED LEGAL RESEARCH AND JUSTICE TRUST (Regd.), ದಕ್ಷಿಣ ಕನ್ನಡ ವತಿಯಿಂದ ಅಕ್ಟೋಬರ್ 16ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿರುವ ಸಮಾಲೋಚನಾ ಸಭೆಯ ಹಿನ್ನೆಲೆಯಲ್ಲಿ ಈ ಭೇಟಿ ನಡೆಯಿತು.

ಈ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಅಗತ್ಯತೆ, ಕರಾವಳಿ ಮತ್ತು ಮಲೆನಾಡು ಭಾಗದ ಜನರು ಎದುರಿಸುತ್ತಿರುವ ತೊಂದರೆಗಳು ಮತ್ತು ನ್ಯಾಯದ ಲಭ್ಯತೆಯ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಪುತ್ತೂರಿನ ವಕೀಲರು ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಅಕ್ಟೋಬರ್ 16ರಂದು ಮಂಗಳೂರಿನ Indian Red Cross Building, Behind Old D.C Office, Statebank ನಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಸಮಾಲೋಚನಾ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಾಗಿ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here