ಕೌಕ್ರಾಡಿ: ತೋಟಗಾರಿಕೆ ಬೆಳೆಗಳ ಬೇಸಾಯದ ತಾಂತ್ರಿಕತೆ ಕುರಿತು ತರಬೇತಿ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ತೋಟಗಾರಿಕೆ ಬೆಳೆಗಳ ಅವಕಾಶಗಳು ಮತ್ತು ಬೇಸಾಯ ತಾಂತ್ರಿಕತೆಗಳ ಕುರಿತು ರೈತರಿಗೆ ಮಾಹಿತಿ ಹಾಗೂ ತರಬೇತಿ ಕಾರ್ಯಕ್ರಮ ಕೌಕ್ರಾಡಿಯಲ್ಲಿ ನಡೆಯಿತು.


ತೋಟಗಾರಿಕೆ ಇಲಾಖೆಯ ತಾಂತ್ರಿಕ ಅಧಿಕಾರಿ ಸಾಯಿನಾಥ್ ಅವರು ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿರುವ ವಿವಿಧ ಅವಕಾಶಗಳು, ಸೂಕ್ತ ಬೆಳೆಗಳ ಆಯ್ಕೆ, ಆಧುನಿಕ ಬೇಸಾಯ ಪದ್ಧತಿಗಳು ಹಾಗೂ ಕೃಷಿಯಲ್ಲಿ ಅಳವಡಿಸಿಕೊಳ್ಳಬಹುದಾದ ತಾಂತ್ರಿಕ ವಿಧಾನಗಳ ಕುರಿತು ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ಸೋಮೇಶ್ ಅವರು ಯೋಜನೆಯ ವಿವಿಧ ಕಾರ್ಯಕ್ರಮಗಳು ಹಾಗೂ ಕೃಷಿ ವಿಸ್ತರಣಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಸೇವಾ ಪ್ರತಿನಿಧಿ ನಮಿತಾ ಶೆಟ್ಟಿ ಉಪಸ್ಥಿತರಿದ್ದರು. ರೈತರು ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಉಪಯುಕ್ತ ಮಾಹಿತಿಗಳನ್ನು ಪಡೆದುಕೊಂಡರು. ಕುಸುಮ ಸ್ವಾಗತಿಸಿ, ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಬೇಬಿ ವಂದಿಸಿದರು.

LEAVE A REPLY

Please enter your comment!
Please enter your name here