







ವಿಟ್ಲ: ಕಳ್ಳತನ ಪ್ರಕರಣದಲ್ಲಿ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ವಿಟ್ಲ ಪೊಲೀಸ್ ಠಾಣೆಯ ಅ.ಕ್ರ: 110/2019, ಕಲಂ 457, 380 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್ ಬಂಧಿತ.


ಆರೋಪಿಯು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ವಿಟ್ಲ ಠಾಣೆಯ ಎಎಸ್‌ಐ ಜಯರಾಮ್ ಹಾಗೂ ಸಿಪಿಸಿ 2462 ಶಿವಾನಂದ ಅವರು ಅ.13ರಂದು ಕೇರಳದ ನೀಲಂಬೂರು ವಂಡೂರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.



ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.










