ಅ.17ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ʼಪುತ್ತೂರುದ ಪಿಲಿಗೊಬ್ಬು -2026ʼ ಸೀಸನ್ 4

0

ಎರಡು ದಿನದ ಫುಡ್ ಫೆಸ್ಟ್ – ಕಲರ್‌ಫುಲ್ ಪಕೋಡಾ ಸ್ಟಾಲ್
ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿ ವೇಷ ತಂಡಗಳು ಭಾಗಿ
ಕೋಸ್ಟಲ್‌ವುಡ್, ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು
ಫುಡ್ ಫೆಸ್ಟ್‌ನಲ್ಲಿ 50 ಕ್ಕೂ ಅಧಿಕ ಸ್ಟಾಲ್

ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಅ.17ರ ಶನಿವಾರ ಪುತ್ತೂರುದ ಪಿಲಿಗೊಬ್ಬು ಸೀಸನ್ -4 ಮತ್ತು ಫುಡ್ ಫೆಸ್ಟ್ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ.

ಪತ್ರಿಕಾಗೋಷ್ಟಿಯಲ್ಲಿ ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷರೂ ಮತ್ತು ಪುತ್ತೂರು ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷರಾಗಿರುವ ಸಹಜ್ ಜೆ ರೈ ಬಳಜ್ಜ ಅವರು ಮಾತನಾಡಿ ಕಳೆದ ಮೂರು ವರ್ಷದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ದೇವರ ಅಶೀರ್ವಾದ ಮತ್ತು ಜನರ ಆಶೀರ್ವಾದದಿಂದ ಬಹಳ ಯಶಸ್ವಿಯಾಗಿ ನಡೆದಿದೆ. ಈ ಭಾರಿಯೂ ಕೂಡಾ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಪಿಲಿಗೊಬ್ಬು ಹಾಗು ಜೊತೆಗೆ ಜನರ ಸಂಭ್ರಮಕ್ಕಾಗಿ ಪುತ್ತೂರು ಫುಡ್ ಫೆಸ್ಟ್ ಅನ್ನು ಅ.17 ಮತ್ತು 18 ರಂದು ನಡೆಯಲಿದೆ, ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿ ವೇಷ ತಂಡಗಳು ಭಾಗಿಯಾಗಲಿದೆ. ಕೋಸ್ಟಲ್‌ವುಡ್, ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು ಇರಲಿದೆ ಫುಡ್ ಫೆಸ್ಟ್‌ನಲ್ಲಿ 50 ಕ್ಕೂ ಅಧಿಕ ಸ್ಟಾಲ್ ಇರಲಿದೆ ಎಂದು ಸಹಜ್ ರೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕಾರ್ಯಾಧ್ಯಕ್ಷ ರತನ್ ರೈ ಕುಂಬ್ರ, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೆಲು, ಉಪಾಧ್ಯಕ್ಷ , ಕೋಶಾಧಿಕಾರಿ ಅಶೋಕ್ ಅಡೂರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here