ಕೌಡಿಚಾರು:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

0

ಆರೋಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ-ಗುಂಡ್ಯಡ್ಕ ವಾಸು ಪೂಜಾರಿ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಆಶ್ರಯದಲ್ಲಿ 35ನೇ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರವು ಕೌಡಿಚಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಗತಿಪರ ಕೃಷಿಕ ಗುಂಡ್ಯಡ್ಕ ವಾಸು ಪೂಜಾರಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಟ್ರಸ್ಟ್ ನಿರಂತರವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಜನರಲ್ಲಿ ಉತ್ತಮ ವಿಶ್ವಾಸವನ್ನು ಗಳಿಸಿದೆ. ಆರೋಗ್ಯದ ದೃಷ್ಟಿಯಿಂದ ಟ್ರಸ್ಟ್ ನಡೆಸುತ್ತಿರುವ ಆಂಬುಲೆನ್ಸ್ ಸೇವೆಯು ಜನರಿಗೆ ಬಹಳಷ್ಟು ಪ್ರಯೋಜನಕಾರಿಯಾಗಿದೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶ್ರೀರಾಮ್ ಭಟ್ ಪಾತಾಳ, ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ತಿಲಕ್ ರೈ ಕುತ್ಯಾಡಿ, ರವಿಕುಮಾರ್ ರೈ ಮಠ, ಕಿಶೋರ್ ಶೆಟ್ಟಿ ಅರಿಯಡ್ಕ, ಭಾಸ್ಕರ ಬಾಲ್ಯಾಯ, ಅಜಿತ್ ಭಂಡಾರಿ, ಕುಂಞಿರಾಮ ಮಣಿಯಾಣಿ, ದೇವಾನಂದ ರೈ, ಹರೀಶ್ ಪೂಜಾರಿ ಮರುವಾಳ, ಪ್ರಜ್ವಲ್ ಘಾಟೆ, ನಾರಾಯಣ ನಾಯ್ಕ ಚಾಕೋಟೆ ಹಾಗೂ ಯೋನಪೋಯ ಮತ್ತು ದೇರಳಕಟ್ಟೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಯುವರಾಜ್ ಪೂಂಜಾ ಸ್ವಾಗತಿಸಿ, ಪಧ್ಮನಾಭ ವಂದಿಸಿದರು. ನೂರಾರು ಮಂದಿ ಭಾಗವಹಿಸಿ ಶಿಬಿರ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here