







ಪುತ್ತೂರು : ಶ್ರೀ ಆದಿಶಕ್ತಿ ಭಜನಾ ಮಂಡಳಿ ಶರವೂರು ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರವೂರು ಇದರ ವತಿಯಿಂದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಭಜನಾ ತರಬೇತಿ ಶಿಬಿರದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸವಣೂರು ಕ್ಲಸ್ಟರ್ ಸಿ ಆರ್ ಪಿ ಜಯಂತ್ ವೈಯವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ರಾವ್ ನಗ್ರಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಹೇಮಂತ್ ರೈ ಮನವಳಿಕೆಗುತ್ತು ಆದಿಶಕ್ತಿ ಭಜನಾ ಮಂಡಳಿ ಅಧ್ಯಕ್ಷ ನೋಣಯ್ಯ ಕೆದಿಲ ಹಿರಿಯ ಭಜಕ ತಿಮ್ಮಪ್ಪ ಮೂಲ್ಯರವರುಗಳು ಉಪಸ್ಥಿತರಿದ್ದರು.












