ಶ್ರೀ ದೇವತಾ ಸಮಿತಿ ವಿಟ್ಲ ಇದರ 55 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವಕ್ಕೆ ಚಾಲನೆ

0

ವಿಟ್ಲ:  ಶ್ರೀ ದೇವತಾ ಸಮಿತಿ ವಿಟ್ಲ ಇದರ 55 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ ಸದನದಲ್ಲಿ ಉದ್ಘಾಟನೆ ಗೊಂಡಿತು. ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ, ನಿಕಟ ಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ಕರ್ನಾಟಕ ರಾಜ್ಯ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿದರು.

ಶ್ರೀ ದೇವತಾ ಸಮಿತಿಯ ಅಧ್ಯಕ್ಷ  ನರ್ಸಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ರಾಧಾಕೃಷ್ಣ ನಾಯಕ್ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ಹೈಕೋರ್ಟ್ ನ್ಯಾಯವಾದಿ, ಕರ್ನಾಟಕ ಬ್ಯಾಂಕ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕ ಡಾ ಅರುಣ್ ಶ್ಯಾಮ್, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ ನಾಯ್ತೋಟು, ಸ್ಥಾಯಿ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಡಾ ಗಾಯತ್ರಿ ಗೀತಪ್ರಕಾಶ್ ಮೊದಲಾದವರು ಭಾಗವಹಿಸಿ ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ ಮಂಗಳೂರು ದೈಜಿವರ್ಲ್ಡ್ ನಿರೂಪಕಿ ಯಕ್ಷಗಾನ ಕಲಾವಿದೆ ಅರ್ಶಿಯಾ ಖಾನ್ ರವರನ್ನು ಸನ್ಮಾನಿಸಲಾಯಿತು.ಶ್ರೀ ದೇವತಾ ಸಮಿತಿ ಕಾರ್ಯದರ್ಶಿ ರಾಘವೇಂದ್ರ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಜತೆಕಾರ್ಯದರ್ಶಿ ಶ್ರೀನಿವಾಸ್ ನಾಯಕ್ ವಂದಿಸಿದರು. ಸುದರ್ಶನ್ ಪಡಿಯಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here