







ನಾಳೆ(ಅ.18 ) ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಚಂಡಿಕಾಹೋಮ


ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 92ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ದಸರಾ ಅಂಗವಾಗಿ ಅ.17ರಂದು ಬೆಳಿಗ್ಗೆ ಶಾರದಾ ವಿಗ್ರಹ ಪ್ರತಿಷ್ಠೆ ನಡೆಯಿತು.



ಮೊದಲಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಹಾರಾಡಿ ಹಿ.ಪ್ರಾ. ಶಾಲೆ ಬಳಿಯ ಶಿವಣ್ಣ ಪ್ರಭು (ಬಾಬುರಾಯ ಹೊಟೇಲ್)ರವರ ಮನೆಯ ಕಟ್ಟಡದ ನಿವಾಸದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಮುಖ್ಯರಸ್ತೆಯಿಂದಾಗಿ ಭಜನಾ ಮಂದಿರಕ್ಕೆ ಆಗಮಿಸಿತು. ಬ್ರಹ್ಮಶ್ರೀ ಕೆಮ್ಮಿಂಜೆ ಕಾರ್ತಿಕ್ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನ ನಡೆಯಿತು.
ಶಾರದೋತ್ಸವ ಉದ್ಘಾಟನೆ: ವಿಗ್ರಹ ಪ್ರತಿಷ್ಠೆ ಬಳಿಕ ಶಾರದೋತ್ಸವ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಬಲ್ನಾಡು ಶ್ರೀ ದಂಡನಾಯಕ ಉಳ್ಳಾಳ್ತಿ ದೈವಸ್ಥಾನದ ಪಾತ್ರಿ ಪರಮೇಶ್ವರ ಗೌಡ ಕಟ್ಟೆಮನೆ ದೀಪ ಬೆಳಗಿಸಿದರು.

ಬ್ರಹ್ಮಶ್ರೀ ಕೆಮ್ಮಿಂಜೆ ಕಾರ್ತಿಕ್ ತಂತ್ರಿ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಂತರ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ದ.ಕ. ಬಿಜೆಪಿ ಮಾಜಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ನಗರಸಭಾ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ, ಉದ್ಯಮಿ ಶಿವರಾಮ ಆಳ್ವ, ಪುತ್ತೂರು ತಮನ್ವಿ ಸಿಲ್ಕ್ಸ್‌ನ ಮಾಲಕಿ ಮಾಲಾಶ್ರೀ, ಭಜನಾ ಮಂದಿರದ ಅಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಾಳೆ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಚಂಡಿಕಾಹೋಮ
ಪುತ್ತೂರು ಶಾರದೋತ್ಸವ ಪ್ರಯುಕ್ತ ಅ.18ರಂದು ಬೆಳಿಗ್ಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವಲ್ಲಿ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಚಂಡಿಕಾ ಹೋಮ ನಡೆಯಲಿದೆ. ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆಯಾಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಂದಿರದ ಅಧ್ಯಕ್ಷರಾದ ಸೀತಾರಾಮ ರೈ ಕೆದಂಬಾಡಿಗುತ್ತು ಹೇಳಿದ್ದಾರೆ.










