







ಪುತ್ತೂರು: ಡಿಸೆಂಬರ್ 14 ಹಾಗೂ 15 ರಂದು ವಿಜ್ರಂಭಣೆಯ ಪಂಚಮಿ ಹಾಗೂ ಷಷ್ಠಿ ಮಹೋತ್ಸವವನ್ನು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಆಚರಿಸುವ ಕುರಿತು ಭಕ್ತಾದಿಗಳ ಪೂರ್ವಭಾವಿ ಸಭೆಯನ್ನು ಅ.18 ರಂದು ಸಂಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳರವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು.


ಪಂಚಮಿ ಹಾಗೂ ಷಷ್ಠಿ ಮಹೋತ್ಸವದ ಕುರಿತು ಹಮ್ಮಿಕೊಳ್ಳುವ ಸಭೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಷಷ್ಠಿ ಮಹೋತ್ಸವವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸಬೇಕು ಎಂದು ಶ್ರೀ ಕ್ಷೇತ್ರದ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













