ನೆಲ್ಯಾಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರಿಗೆ ಕ್ರೀಡಾಕೂಟ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೆಲ್ಯಾಡಿ ವಲಯದ ಸಂಯುಕ್ತ ಆಶ್ರಯದಲ್ಲಿ ನೆಲ್ಯಾಡಿ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಪದಗ್ರಹಣದ ಪ್ರಯುಕ್ತ ಒಕ್ಕೂಟದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆ ಆ.16ರಂದು ನೆಲ್ಯಾಡಿ ಗಾಂಧಿ ಮೈದಾನದಲ್ಲಿ ನಡೆಯಿತು.

ನೆಲ್ಯಾಡಿ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷ ಕುಶಾಲಪ್ಪ ಗೌಡ ಪಿ.ಎನ್. ಅವರು ಉದ್ಘಾಟಿಸಿ ಮಾತನಾಡಿ, ನೆಲ್ಯಾಡಿ ವಲಯದಲ್ಲಿ ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘಗಳಲ್ಲಿ ಸುಮಾರು 2,500ಕ್ಕೂ ಅಧಿಕ ಮಂದಿ ಸದಸ್ಯರಿದ್ದಾರೆ. ಸಂಘಗಳ ಮೂಲಕ ಸದಸ್ಯರ ಆರ್ಥಿಕ ಪ್ರಗತಿಯ ಜತೆಗೆ ಸಾಮಾಜಿಕ ಮತ್ತು ವೈಯಕ್ತಿಕ ಬೆಳವಣಿಗೆಗೂ ಪ್ರೋತ್ಸಾಹ ದೊರೆಯುತ್ತಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ, ಉದ್ಯೋಗ, ಕುಟುಂಬದ ಜವಾಬ್ದಾರಿ ಹಾಗೂ ದಿನನಿತ್ಯದ ಕಾರ್ಯಗಳ ಒತ್ತಡದ ನಡುವೆ ಮಾನಸಿಕ ನೆಮ್ಮದಿಯನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯವಾಗಿದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯ ವೃದ್ಧಿಸುವುದರ ಜತೆಗೆ ಮಾನಸಿಕ ಉಲ್ಲಾಸವೂ ದೊರೆಯುತ್ತದೆ ಎಂದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನ ಕಡಬ ತಾಲೂಕು ಸದಸ್ಯ ತುಕಾರಾಮ ರೈ, ಅಂರ‍್ರಾಜ್ಯ ಕ್ರೀಡಾ ನಿರೂಪಕ ಸುರೇಶ್ ಪಡಿಪಂಡ ಶುಭ ಹಾರೈಸಿದರು.

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೆಲ್ಯಾಡಿ ವಲಯಾಧ್ಯಕ್ಷೆ ಸುಪ್ರೀತಾ ರವಿಚಂದ್ರ, ಕಡಬ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ರಮೇಶ್ ಬಾಣಜಾಲು, ಪಡುಬೆಟ್ಟು ಒಕ್ಕೂಟದ ಅಧ್ಯಕ್ಷ ಜಾನ್ ಮೊಂತೇರೋ, ಶಿರಾಡಿ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಕೆ.ಆರ್., ಅಡ್ಡಹೊಳೆ ಒಕ್ಕೂಟದ ಅಧ್ಯಕ್ಷ ಸಣ್ಣಿ ಪಿ.ಎಸ್., ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ., ನೆಲ್ಯಾಡಿ ಒಕ್ಕೂಟದ ಅಧ್ಯಕ್ಷೆ ಸುಮಿತ್ರ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾಗೂ ಕಟ್ಟೆಮಜಲು ಒಕ್ಕೂಟದ ಅಧ್ಯಕ್ಷ ಮಾರ್ಸಲ್ ಡಿ’ಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ನಮಿತಾ ಶೆಟ್ಟಿ ಪ್ರಾರ್ಥಿಸಿದರು. ನೆಲ್ಯಾಡಿ ಒಕ್ಕೂಟದ ನಿಯೋಜಿತ ಅಧ್ಯಕ್ಷ ನಾರಾಯಣ ಹೆಗ್ಡೆ ಸ್ವಾಗತಿಸಿದರು. ನೆಲ್ಯಾಡಿ ವಲಯದ ಮೇಲ್ವಿಚಾರಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ. ವಂದಿಸಿದರು. ಸೇವಾ ಪ್ರತಿನಿಧಿಗಳಾದ ನಮಿತಾ ಎಸ್. ಶೆಟ್ಟಿ, ಹೇಮಾವತಿ ಜೆ., ವೇದಾ ಪಿ., ಮೋಹಿನಿ, ಸುಮನ ಎಸ್., ಪ್ರಿಯಲತಾ, ಸಂತೋಷ್ ಹಾಗೂ ಸುನಿ ಸಹಕರಿಸಿದರು.

LEAVE A REPLY

Please enter your comment!
Please enter your name here